ಬೆಂಗಳೂರು ಉತ್ತರ: ಹೆಬ್ಬಗೋಡಿಯಲ್ಲಿ ಕಾಂಪೌಂಡ್ ಕುಸಿದು ಕಾರ್ಮಿಕ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ
ಹೆಬ್ಬಗೋಡಿಯಲ್ಲಿ ಮಂಗಳವಾರ ಕಾಂಪೌಂಡ್ ನಿರ್ಮಾಣದ ವೇಳೆ ಗೋಡೆ ಕುಸಿದು ಒರಿಸ್ಸಾ ಮೂಲದ ಕಾರ್ಮಿಕ ವಿಷ್ಣುನಾಗ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಕಾರ್ಮಿಕ ಹುಸೇನ್ ಗಂಭೀರ ಗಾಯಗೊಂಡಿದ್ದಾರೆ. ಕೆಜಿಎಫ್ ಬಾಬು ಅವರಿಗೆ ಸೇರಿದ ಜಾಗದಲ್ಲಿ ತಗ್ಗು ಪ್ರದೇಶದಲ್ಲಿ ಕಾಂಪೌಂಡ್ ನಿರ್ಮಾಣ ಮಾಡುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಯಾವುದೇ ಸುರಕ್ಷತೆ ಇಲ್ಲದೆ ಕಾಮಗಾರಿ ನಡೆಯುತ್ತಿತ್ತು ಎಂದು ತಿಳಿದುಬಂದಿದೆ. ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.