ಶಿವಮೊಗ್ಗ: ಜಿಲ್ಲೆಯ ಹಲವು ಹೆದ್ದಾರಿ ಕಾಮಗಾರಿ ಕುರಿತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೆಹಲಿಯಲ್ಲಿ ಶಿವಮೊಗ್ಗದ ಸಂಸದ ಬಿ ವೈ ರಾಘವೇಂದ್ರ ಮನವಿ
ಕೇಂದ್ರ ಭೂಸಾರಿಗೆ ಮಂತ್ರಾಲಯದ ಸಚಿವ ನಿತಿನ್ ಗಡ್ಕರಿ ಅವರಿಗೆ ಸೋಮವಾರ ಅವರ ದೆಹಲಿಯ ಗೃಹ ಕಚೇರಿಯಲ್ಲಿ ಸಂಸದ ಬಿ ವೈ ರಾಘವೇಂದ್ರ ಅವರು ಭೇಟಿ ಮಾಡಿ ಲೋಕಸಭಾ ವ್ಯಾಪ್ತಿಯಲ್ಲಿ ಅಭಿವೃದ್ಧಿಯಾಗಬೇಕಾದ ಹೆದ್ದಾರಿ ಕಾಮಗಾರಿಗಳ ಅಗತ್ಯಗಳ ಬಗ್ಗೆ ಚರ್ಚಿಸಿ ಯೋಜನೆಗಳಿಗೆ ಅನುಮೋದನೆ ದೊರಕಿಸಿಕೊಡಲು ಮನವಿಯನ್ನು ಮಾಡಿದರು. ಆಗುಂಬೆ ಘಾಟ್ ರಸ್ತೆಗೆ ಪರ್ಯಾಯವಾಗಿ ಮೇಗರವಳ್ಳಿಯಿಂದ ಸೋಮೇಶ್ವರದವರಿಗೆ ನಾಲ್ಕು ಪಥದ ಸುರಂಗ ಮಾರ್ಗದ ರಸ್ತೆ ನಿರ್ಮಾಣ ಕುರಿತಂತೆ ವಿವಿಧ ಕಾಮಗಾರಿಗಳ ಕುರಿತಾಗಿ ಸಚಿವರೊಂದಿಗೆ ಸಂಸದರು ಚರ್ಚೆಯನ್ನ ನಡೆಸಿದ್ದಾರೆ. ಈ ಸಂಬಂಧ ಸಚಿವರು ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಭೂಸಾರಿಗೆ ಮಂತ್ರಾಲಯದ ಅಧಿಕಾರಿಗಳಿಗೆ ಕಾಮಗಾರಿಗಳ ಯೋಜನೆ ವರದಿ ತಯಾರಿಸಲು ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.