ಚಾಮರಾಜನಗರ: ಅಂಗಡಿ ಮಾಲೀಕರ ಮೇಲೆ ಹಲ್ಲೆ ಮಾಡಿದ ವ್ಯಕ್ತಿಗಳನ್ನು ಬಂಧಿಸಿ, ಗಡಿಪಾರು ಮಾಡಿ : ನಗರದಲ್ಲಿ ಹಿಂದು ಮುಖಂಡ ಶಿವು ವಿರಾಟ್
ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹಿಂದು ಸಂಘಟನೆಯ ಮುಖಂಡ ಶಿವು ವಿರಾಟ್ ಮಾತನಾಡಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲೆ ಶೂ ಎಸೆತ ಪ್ರಕರಣ ಖಂಡಿಸಿ ಶನಿವಾರ ಚಾಮರಾಜನಗರ ಬಂದ್ ವೇಳೆ ಅಂಗಡಿಯೊಂದರ ಮಾಲೀಕರ ಮೇಲೆ ಹಲ್ಲೆ ನಡೆಸಿರುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು. ಅಂಗಡಿ ಮಾಲೀಕನ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂಧಿಸಿರುವುದು ಖಂಡನೀಯ ಕೂಡಲೇ ಸಿಸಿ ಕ್ಯಾಮೆರಾ ಆಧಾರದ ಮೇಲೆ ಕಿಡಿಗೇಡಿಗಳನ್ನ ಬಂಧಿಸಿ ಗಡಿಪಾರು ಮಾಡಬೇಕು ಎಂದರು