2025ರ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ವ್ಯವಸ್ಥಿತ ಕಾರ್ಯಯೋಜನೆಗಾಗಿ ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಿಲ್ಲಾ ಸಮನ್ವಯ ಸಮಿತಿಯ ಸಭೆಯನ್ನು ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ನಡೆಸಲಾಯಿತು. ಈ ಸಂದರ್ಭದಲ್ಲಿ ಡಬ್ಲ್ಯೂಎಚ್ಒ ಸಂಸ್ಥೆಯ ಎಸ್.ಎಂ.ಒ ಡಾ. ನಾಗರಾಜ್, ಉಪ ಆರೋಗ್ಯಾಧಿಕಾರಿಗಳು, ಎಲ್ಲಾ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆಡಳಿತ ವೈದ್ಯಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರತಿನಿಧಿಗಳು, ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು, ಅಪಾರ್ಟ್ಮೆಂಟ್ಗಳ ಪ್ರತಿನಿಧಿಗಳು, ಸ್ವಯಂಸೇವಾ ಸಂಘಟನೆಗಳು (ಎನ್ಜಿಒ), ರೋಟರಿ ಕ್ಲಬ್ ಸೇರಿದಂತೆ ಒಟ್ಟು 95ಕ್ಕೂ ಹೆಚ್ಚು ಮಂದಿ ಭಾಗವಹಿಸಿದರು.