ಕೊಪ್ಪ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಬಿದ್ದ ಕಾರು.! ಅದೃಷ್ಟವಶಾತ್ ಕಾರಿನಲ್ಲಿದ್ದವರು ಪಾರು, ಸನ್ ಸೆಟ್ ಪಾಯಿಂಟ್ ಬಳಿ ಅವಘಡ.!.
ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಕಂದಕಕ್ಕೆ ಬಿದ್ದಿದ್ದು ಕಾರಿನಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪ ಸನ್ಸೆಟ್ ಪಾಯಿಂಟ್ ಬಳಿ ನಡೆದಿದೆ. ಕೊಪ್ಪ ಜಯಪುರ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ನುಗ್ಗಿದ್ದರಿಂದ ಸ್ಥಳೀಯರು ಕೂಡಲೇ ಕಾರಿನಲ್ಲಿದ್ದವರನ್ನು ರಕ್ಷಿಸಿ, ಟ್ರ್ಯಾಕ್ಟರ್ ಮೂಲಕ ಕಾರು ಹೊರ ತೆಗೆದಿದ್ದಾರೆ.