ಇಳಕಲ್: ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮೇಲೆ ಶೂ ಎಸೆದ ಘಟನೆ ಖಂಡಿಸಿ ಇಳಕಲ್ಲದಲ್ಲಿ ಬೃಹತ್ ಪ್ರತಿಭಟನೆ
Ilkal, Bagalkot | Oct 16, 2025 ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ಘಟನೆಯನ್ನು ಖಂಡಿಸಿ ಅಕ್ಟೋಬರ್ ೧೭ರಂದು ಇಲಕಲ್ಲ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಡಾ. ಬಿ.ಆರ್. ಅಂಬೇಡ್ಕರ್ ದಲಿತ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಶರಣಪ್ಪ ಆಮದಿಹಾಳ ಹೇಳಿದರು. ಇಳಕಲ್ ನಗರದಲ್ಲಿ ಅ.೧೬ ಗುರುವಾರ ಸಾಯಂಕಾಲ ೪ ಗಂಟೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಗರದ ವಿವಿಧ ಸಮಾಜದ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿಭಟನಾ ಮೆರವಣಿಗೆ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಪ್ರಾರಂಭವಾಗಿ ಎಸ್.ಆರ್. ಕಂಠಿ ಸರ್ಕಲ್ ಮಾರ್ಗವಾಗಿ ಬಸವೇಶ್ವರ ವೃತ್ತದವರೆಗೆ ಸಾಗುತ್ತದೆ. ನಂತರ ಮೆರವಣಿಗೆ ಮರಳಿ ಎಸ್.ಆರ್. ಕಂಠಿ ವೃತ್ತಕ್ಕೆ ತಲುಪಲಿದ್ದು, ಬಳಿಕ ಮಾನ್ಯ ತಹಸಿಲ್ದಾರ್ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲ