ಚಿಂಚೋಳಿಯ ಶಾಸಕ ಡಾ. ಅವಿನಾಶ್ ಜಾಧವ್ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಕಾಳಗಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು. ತಾಲೂಕಿನ ಅಭಿವೃದ್ಧ ಕಾಮಗಾರಿಗಳ ಪರೀಶಿಲನೆ ಮಾಡಿದ ಶಾಸಕರು, ನಿಗಧಿತ ಸಮಯದಲ್ಲಿ ಕಾಮಗಾರಿ ಕೈಗೊಳ್ಳದ ಹಾಗೂ ವಸತಿ ಯೋಜನೆಗಳ ಉದ್ದೇಶ ಈಡೇರಿಸದೆ ನಿರ್ಲಕ್ಷ ವಹಿಸಿದ ಅಧಿಕಾರಿಗಳ ವಿರುದ್ಧ ಹರಿಹಾಯ್ದು ಖಡಕ್ ಸೂಚನೆ ನೀಡಿದರು ಎಂದು ಶೆನಿವಾರ 5 ಗಂಟೆಗೆ ಮಾಹಿತಿ ಲಭ್ಯವಾಗಿದೆ.