ಕಲಬುರಗಿ : ಹುಬ್ಬಳ್ಳಿಯಲ್ಲಿ ಮರ್ಯಾದ ಹತ್ಯೆಗೆ ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗ್ತಿದೆ.. ಅದರಂತೆ ಕಲಬುರಗಿ ಜಿಲ್ಲೆ ಯಡ್ರಾಮಿ ಪಟ್ಟಣದಲ್ಲಿ ಸಹ ಡಿ30 ರಂದು ಬೆಳಗ್ಗೆ 11.30 ಕ್ಕೆ ಮರ್ಯಾದ ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸಲಾಗಿದೆ.. ಜಾಂಬವ ಯುವ ಸೇನೆ ಸಂಘಟನೆ ಕಾರ್ಯಕರ್ತರು ಪಟ್ಟಣದ ಡಾ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಮಾಡುವ ಮೂಲಕ ಮರ್ಯಾದ ಹತ್ಯೆಯನ್ನ ಖಂಡಿಸಿದರು.. ಇನ್ನೂ ಮರ್ಯಾದ ಹತ್ಯೆ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ತಹಶಿಲ್ದಾರ್ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು