ಬೆಂಗಳೂರು ಉತ್ತರ: ಬೆಂಗಳೂರು ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಸಮಾಜವಾದಿ ಸಮ್ಮೇಳನಕ್ಕೆ ಸಿದ್ದರಾಮಯ್ಯ ಚಾಲನೆ
ಬೆಂಗಳೂರು ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಸಮಾಜವಾದಿ ಅಧ್ಯಯನ ಕೇಂದ್ರ ಮತ್ತು ಸಮಾಜವಾದಿ ಸಮಾಗಮ ಸಂಸ್ಥೆ ಆಯೋಜಿಸಿದ್ದ “ದಕ್ಷಿಣ ಭಾರತ ಸಮಾಜವಾದಿಗಳ ಸಮ್ಮೇಳನ”ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಸಮಾಜವಾದಿ ಚಿಂತನೆ ಸಾಗಿಬಂದ ಹಾದಿಯನ್ನು ಸ್ಮರಿಸಿದರು. ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳಾದ ಸುದರ್ಶನ ರೆಡ್ಡಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರಾದ ಬಿ.ಆರ್. ಪಾಟೀಲ್, ಕೇರಳದ ಮಾಜಿ ಹಣಕಾಸು ಸಚಿವ ಹಾಗೂ ಹಿರಿಯ ಸಮಾಜವಾದಿ ಚಿಂತಕರಾದ ಐಸಾಕ್ ಥಾಮಸ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.