ಚಳ್ಳಕೆರೆ: ನಗರದ ಪೊಲೀಸ್ ಠಾಣೆಯ ಬಳಿ ವಿವಿಧ ವಾಹನ ಚಾಲಕರಿಗೆ ರಸ್ತೆ ಸುರಕ್ಷಿತೆ ಕುರಿತು ಜಾಗೃತಿ ಕಾರ್ಯಕ್ರಮ
ಚಳ್ಳಕೆರೆ ನಗರದ ಪೊಲೀಸ್ ಠಾಣೆಯ ಬಳಿ ವಿವಿಧ ವಾಹನ ಚಾಲಕರಿಗೆ ರಸ್ತೆ ಸುರಕ್ಷಿತೆ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಡಿವೈಎಸ್ಪಿ ಸತ್ಯ ನಾರಾಯಣರಾವ್ ಅವರ ನೇತೃತ್ವದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ವಾಹನ ಮಾಲೀಕರು ಹಾಗೂ ಚಾಲಕರು ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು ಎಂದು ಕಿವಿಮಾತು ಹೇಳಿದರು