ದಾಂಡೇಲಿ : ಗಾಂಧಿನಗರದ ಶ್ರೀ ವಿಘ್ನೇಶ್ವರ ಮಾರುತಿ ದೇವಸ್ಥಾನದಲ್ಲಿ ದೇವಸ್ಥಾನದ 15ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವು ನ.17 ರಿಂದ ಆರಂಭಗೊಂಡು ನ.19ರವರೆಗೆ ಸಂಭ್ರಮ ಸಡಗರ ಹಾಗೂ ಶ್ರದ್ಧಾಭಕ್ತಿಯಿಂದ ನಡೆಯಲಿದೆ. ಈಗಾಗಲೇ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಸಿದ್ಧತೆಗಳು ಭಾನುವಾರ ರಾತ್ರಿ 8:30 ಗಂಟೆ ಸುಮಾರಿಗೆ ಪೂರ್ಣಗೊಂಡಿದೆ. ಕೇರಳದ ಬ್ರಹ್ಮಶ್ರೀ ವಾಮನನ್ ನಂಬೂದ್ರಿ ಅವರ ಸಾನಿಧ್ಯದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಚೇತನ್ ಭಟ್ ಅವರ ಪೌರೋಹಿತ್ಯದಲ್ಲಿ ಪೂಜಾ ಕಾರ್ಯಕ್ರಮಗಳು ನಡೆಯಲಿದೆ. ನ.17ರಂದು ಸೋಮವಾರ ಸಂಜೆ 5 ಗಂಟೆಗೆ ಶ್ರೀಮಹಾಗಣಪತಿ ಮತ್ತು ಶ್ರೀ ಆಂಜನೇಯ ಸ್ವಾಮಿಯ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಲಿದೆ.