ಹರಪನಹಳ್ಳಿ: ಹರಪನಹಳ್ಳಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ
ವಿಜಯನಗರ ಜಿಲ್ಲೆಯ ಹರಪನಹಳ್ಳಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ್ ಉದ್ಘಾಟಿಸಿದರು.