ಯಲ್ಲಾಪುರ:ಗುಳ್ಳಾಪುರ ಸೇತುವೆ ನಿರ್ಮಾಣ ಕಾರ್ಯಕ್ಕೆ ಸಂಬಂಧಿಸಿದಂತೆ ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಶಾಸಕರಾದ ಶಿವರಾಮ ಹೆಬ್ಬಾರ್ ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಡಿ.ಪಿ.ಆರ್ ಸಿದ್ಧಪಡಿಸುತ್ತಿರುವ ಗುತ್ತಿಗೆ ಸಂಸ್ಥೆಯ ತಾಂತ್ರಿಕ ತಂಡದೊಂದಿಗೆ ಸಭೆ ನಡೆಸಿದರು. ಸೇತುವೆ ನಿರ್ಮಾಣ ಪ್ರಕ್ರಿಯೆಗೆ ಸಂಬಂಧಿಸಿದ ತಾಂತ್ರಿಕ ಅಂಶಗಳು, ವಿನ್ಯಾಸ, ವೆಚ್ಚ ಹಾಗೂ ಕಾರ್ಯಗತಿಯ ಕುರಿತು ಅಧಿಕಾರಿಗಳಿಂದ ವಿವರವಾದ ಮಾಹಿತಿ ಪಡೆದ ಶಾಸಕರು, ಯೋಜನೆಯನ್ನು ವೇಗವಾಗಿ ಹಾಗೂ ಗುಣಮಟ್ಟದೊಂದಿಗೆ ಮುನ್ನಡೆಸುವಂತೆ ಅಗತ್ಯ ಸಲಹೆಗಳನ್ನು ನೀಡಿದರು.