ಕಲಬುರಗಿ : ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ, ಡಿಸಿಎಂ, ದೆಹಲಿ ಹೈಕಮಾಂಡ್ ತೀರ್ಮಾನ ಮಾಡುತ್ತೆ.. ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನಾಗಲಿ ಉಳಿದವರಾಗಲಿ ಬದ್ಧ ಆಗಿರ್ತಿವಿ ಅಂತಾ ಕೆಕೆಆರ್ಡಿಬಿ ಅಧ್ಯಕ್ಷ ಹಾಗೂ ಜೇವರ್ಗಿ ಶಾಸಕ ಡಾ ಅಜಯ್ಸಿಂಗ್ ಹೇಳಿದ್ದಾರೆ... ಡಿ6 ರಂದು ಮಧ್ಯಾನ 2 ಗಂಟೆಗೆ ಕಲಬುರಗಿಯಲ್ಲಿ ಮಾತನಾಡಿದ ಅವರು, ಸಿಎಂ ಕುರ್ಚಿ ವಿಚಾರದ ಗೊಂದಲಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಎಂ, ಡಿಸಿಎಂ ಜಂಟಿ ಸುದ್ದಿಗೋಷ್ಟಿ ನಡೆಸಿ ಗೊಂದಲಕ್ಕೆ ತೆರೆ ಎಳೆದು ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರೆಂದು ಶಾಸಕ ಡಾ ಅಜಯ್ಸಿಂಗ್ ಸ್ಪಷ್ಟಪಡಿಸಿದ್ದಾರೆ