ಯಲ್ಲಾಪುರ : ಯಲ್ಲಾಪುರ ಪಟ್ಟಣದ ಕಾಳಮ್ಮನಗರದಲ್ಲಿ ಮುಸ್ಲಿಂ ಯುವಕ ನಿಂದ ರಂಜಿತಾ ಬನಸೋಡೆ ಅವರ ಭೀಕರ ಹತ್ಯೆಯ ಅಹಿತಕರ ಘಟನೆ ಸಂಭವಿಸಿದೆ. ಘಟನೆಯ ವಿಷಯ ತಿಳಿದ ತಕ್ಷಣ ಶಿವರಾಮ ಹೆಬ್ಬಾರ್ ಅವರು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪ್ರಕರಣದ ಕುರಿತು ಮಾಹಿತಿ ಪಡೆದರು. ನಂತರ ಘಟನೆ ಸಂಭವಿಸಿದ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಮೃತರ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿ ಧೈರ್ಯ ತುಂಬಿದರು.