ತೀರ್ಥಹಳ್ಳಿ: ಆಗುಂಬೆ ಬಳಿ ರಾಷ್ಟ್ರೀಯ ಹೆದ್ದಾರಿ ದಾಟಿದ ಒಂಟಿ ಸಲಗದ ವಿಡಿಯೋ ವೈರಲ್
ತೀರ್ಥಹಳ್ಳಿ ತಾಲೂಕಿನ ಆಗುಂಬೆ ಭಾಗದಲ್ಲಿ ಒಂಟಿ ಸಲಗದ ಹಾವಳಿ ಹೆಚ್ಚಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಬಳಿ ಹಾದು ಹೋಗುವ ರಾಷ್ಟೀಯ ಹೆದ್ದಾರಿಯಲ್ಲಿ ಹಾಡು ಹಗಲೇ ಗಜಗಾಂಭೀರ್ಯದಿಂದ ಒಂಟಿ ಸಲಗ ಒಂದು ರಾಷ್ಟ್ರೀಯ ಹೆದ್ದಾರಿಯನ್ನ ದಾಟುವ ವಿಡಿಯೋ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಭಾನುವಾರ ವಿಡಿಯೋ ವೈರಲಾಗಿದೆ. ರಾಷ್ಟ್ರೀಯ ಹೆದ್ದಾರಿಯನ್ನು ದಾಟಿ ಆಗುಂಬೆಯ ಸಮೀಪ ಐಬಿ ಬಳಿ ಆನೆ ಹೋಗಿರುವ ಮಾಹಿತಿ ಲಭ್ಯವಾಗಿದ್ದು,ಒಂಟಿ ಸಲಗದ ಓಡಾಟದಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.