ನಂಜನಗೂಡು: ಬಾಂಡ್ ಮೂಲಕ ನೀವು ಸಂಗ್ರಹಿಸಿದ 7600 ಕೋಟಿ ಹಣಕ್ಕೆ ತೆರಿಗೆ ಕಟ್ಟಿದ್ದೀರಾ ಮೋದಿಯವರೇ? ಈಗ ಯಾರನ್ನು ಜೈಲಿಗೆ ಕಳುಹಿಸಬೇಕು ಮೋದಿಯವರೇ ಹೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ನಂಜನಗೂಡು ತಾಲ್ಲೂಕಿನ ಕಳಲೆ ಗ್ರಾಮದ ಗೇಟ್ ಬಳಿ ಚಾಮರಾಜನಗರ ಲೋಕಾಭಾ ಕ್ಷೇತ್ರದ ಚುನಾವಣಾ ಪ್ರಚಾರ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.