BREAKING NEWS || ರೌಡಿಶೀಟರ್ಗಳ ಪರೇಡ್: ಗಣೇಶೋತ್ಸವ ಶಾಂತಿಯುತ ಆಚರಣೆಗೆ ಪೊಲೀಸ್ ಎಚ್ಚರಿಕೆ
ಭಾಲ್ಕಿ: ಮುಂಬರುವ ಗಣೇಶೋತ್ಸವ ಹಿನ್ನೆಲೆಯಲ್ಲಿ ಭಾಲ್ಕಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ರೌಡಿಶೀಟರ್ಗಳ ಪರೇಡ್ ನಡೆಸಿ, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.
ಡಿವೈಎಸ್ಪಿ ಅವರ ನೇತೃತ್ವದಲ್ಲಿ ಹಾಗೂ ಭಾಲ್ಕಿ ಗ್ರಾಮೀಣ ಸಿಪಿಐ ಅವರ ಸಮ್ಮುಖದಲ್ಲಿ ಭಾಲ್ಕಿ ನಗರ ಠಾಣೆಯ ರೌಡಿಶೀಟರ್ಗಳ ಪರೇಡ್ ನಡೆಸಲಾಯಿತು.
ಈ ಸಂದರ್ಭದಲ್ಲಿ ಮುಂಬರುವ ಗಣೇಶೋತ್ಸವವನ್ನು ಶಾಂತಿಯುತವಾಗಿ ಆಚರಿಸಬೇಕು. ಯಾವುದೇ ರೀತಿಯ ಅಶಾಂತಿ, ಗಲಾಟೆ ಅಥವಾ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬಾರದು ಎಂದು ಪೊಲೀಸರು ಸೂಚಿಸಿದರು.
ಸಮಾಜದಲ್ಲಿ ಅಶಾಂತಿ ಉಂಟುಮಾಡುವಂತಹ ಕೃತ್ಯಗಳಲ್ಲಿ ಯಾರೇ ಭಾಗಿಯಾದರೂ ಅವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದರು.
ಗಣೇಶೋತ್ಸವ ಸೇರಿದಂತೆ ಯಾವುದೇ ಹಬ್ಬವನ್ನು ಶಾಂತಿ, ಸೌಹಾರ್ದತೆ ಹಾಗೂ ಸಹಬಾಳ್ವೆಯೊಂದಿಗೆ ಆಚರಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
Yadgir, Yadgir | Sep 8, 2026