ನಂಜನಗೂಡು: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಮತ್ತೊಮ್ಮೆ ಬಿಜೆಪಿ ಜಯ ಸಾಧಿ ಸಲಿದ್ದು, ಅಭ್ಯರ್ಥಿ ಬಾಲರಾಜ್ ಅವರನ್ನು ಮತದಾರರು ಗೆಲ್ಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ನಂಜನಗೂಡಿನಲ್ಲಿ ಬಿಜೆಪಿ ಉತ್ತಮ ನೆಲೆ ಹೊಂದಿದ್ದು, ಈ ಬಾರಿಯ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ವಿಜಯ ಸಾಧಿಸಲಿದ್ದಾರೆ ಎಂದರು.