ಕೊಪ್ಪ: ಧಾರಾಕಾರ ಮಳೆಗೆ ಬೆಚ್ಚಿಬಿದ್ದ ಮಲೆನಾಡಿಗರು.! ಬಸರೀಕಟ್ಟೆಯಲ್ಲಿ ಭಾರೀ ಬಿರುಗಾಳಿ ಮಳೆ.!
ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಮಲೆನಾಡಿಗರು ಬೆಚ್ಚಿ ಬಿದ್ದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಬಸರಿಕಟ್ಟೆಯಲ್ಲಿ ಗಂಟೆಗಟ್ಟಲೆ ಸುರಿದ ಭಾರಿ ಮಳೆಗೆ ರಸ್ತೆಗಳೆಲ್ಲ ಜಲಾವೃತವಾಗಿದ್ದು ವಾಹನ ಸವಾರರು ಪರದಾಟ ಪಟ್ಟಿದ್ದಾರೆ.