ಶಿಡ್ಲಘಟ್ಟ ಪ್ರಕರಣದಲ್ಲಿ ಕ್ರಮ ಆಗದ ವಿಚಾರಕ್ಕೆ ಸಂಬಂಧಿಸಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಜೆಪಿ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಾರೇ ತಪ್ಪು ಮಾಡಲಿ, ನಾನು ನಿನ್ನೇಯೂ ಸಹ ಹೇಳಿದ್ದೇನೆ. ಇಂತಹ ಪ್ರಕರಣದಲ್ಲಿ ಯಾವುದೇ ಪಕ್ಷ ಇರಲಿ. ಒಂದು ಕಠಿಣ ತೀರ್ಮಾನವನ್ನು ಸರ್ಕಾರ ಕ್ರಮ ತೆಗೆದುಕೊಂಡರೆ, ಇಂತಹ ಘಟನೆ ಪದೇ ಪದೇ ನಡೆಯಲ್ಲ, ನನ್ನ ಅಭಿಪ್ರಾಯದಲ್ಲಿ. ಸರ್ಕಾರ ಇದನ್ನ ಗಂಭೀರವಾಗಿ ತೆಗೆದುಕೊಳ್ಳಬೇಕು. ಇಲ್ಲಿ ಪ್ರಶ್ನೆ ಯಾವ ಪಕ್ಷದ ಕಾರ್ಯಕರ್ತ ಅನ್ನೋದಕ್ಕಿಂತ ಹೆಚ್ಚಾಗಿ, ಅಧಿಕಾರಗಳ ಜೊತೆಗೆ ನಮ್ಮ ನಡುವಳಿಕೆ ಹೇಗೆ ಇರಬೇಕು. ಯಾವುದೋ ಸಮಯದಲ್ಲಿ ಅಧಿಕಾರಿಗಳ ಮೇಲೆ ಒತ್ತಡ ಬರುತ್ತಿದೆ.