ಬ್ಯಾಕಲಾಗ್ ಹುದ್ದೆಗಳ ಭರ್ತಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತಡ ಒತ್ತಾಯಿಸಿ ವಿದ್ಯಾರ್ಥಿಗಳು ಹಾಗೂ ರೈತ ಸಂಘಟನೆಯವರು ಜಂಟಿಯಾಗಿ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಬಿಜೆಪಿ ಶಾಸಕ ಜಗದೀಶ ಗುಡಗುಂಟಿ ಬೆಂಬಲಿಗರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆದ ಘಟನೆ ಜರುಗಿದೆ. ಜಮಖಂಡಿ ನಗರದ ತಾಲೂಕಾ ಆಡಳಿತಭವನದ ಮುಂದೆ ಪ್ರತಿಭಟನೆ ನಡೆಯುತ್ತಿದ್ದ ವೇಳೆ ರೈತ ಮುಖಂಡ ಮುತ್ತಪ್ಪ ಕೋಮಾರ್ ಅವರು,ವಿರೋಧ ಪಕ್ಷದಲ್ಲಿರುವ ಬಿಜೆಪಿ ಶಾಸಕರಾದ ತಾವು ಬೇಡಿಕೆಗಳನ್ನ ಈಡೇರಿಸುವಲ್ಲಿ ಸರ್ಕಾರದ ಮೇಲೆ ಯಾವ ರೀತಿ ಒತ್ತಡ ಹಾಕುತ್ತೀರಿ ಎಂದು ಪ್ರಶ್ನಿಸಿದ ವೇಳೆ ಘಟನೆ ಜರುಗಿದೆ.