ಮಳವಳ್ಳಿ : ಎಲ್ಲಾ ವರ್ಗದ ಜನರನ್ನು ಒಗ್ಗೂಡಿಸಿ ಸದೃಢ ಅಖಂಡ ಭಾರತವನ್ನು ನಿರ್ಮಿಸುವಲ್ಲಿ ಸಂವಿಧಾನ ಮೂಲ ಕಾರಣವಾಗಿದ್ದು ಇಂತಹ ವಿಶ್ವಶ್ರೇಷ್ಠ ಸಂವಿಧಾನವನ್ನು ದೇಶಕ್ಕೆ ನೀಡಿದ ಭಾರತ ರತ್ನ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸದಾ ಸ್ಮರಣೀಯರು ಎಂದು ಶಾಸಕರು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರೂ ಆದ ಪಿ ಎಂ ನರೇಂದ್ರಸ್ವಾಮಿ ಸ್ಮರಿಸಿದ್ದಾರೆ. ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ 69ನೇ ಪರಿ ನಿರ್ವಾಣ ದಿನದ ಅಂಗವಾಗಿ ಶನಿವಾರ ಮಧ್ಯಾಹ್ನ1 ಗಂಟೆ ಸಮಯದಲ್ಲಿ ಮಳವಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಇರುವ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪುಷ್ಪಾರ್ಚನೆ ಮಾಡುವು ದರ ಜೊತೆಗೆ ದೀಪ ಬೆಳಗಿಸಿ ಗೌರವ ನಮನ ಸಲ್ಲಿಸಿದ ನಂತರ ಮಾತನಾಡಿದರು