ಮೊಳಕಾಲ್ಮುರು:-ಇತ್ತೀಚೆಗೆ ಗ್ರಾಮೀಣ ಪ್ರದೇಶದಲ್ಲಿ ದರೋಡೆ ಪ್ರಕರಣಗಳು ಜಾಸ್ತಿ ಆಗುತ್ತಿದ್ದು ಪ್ರತಿಯೊಬ್ಬರೂ ಮನೆಗಳಿಗೆ ಸಿಸಿ ಕ್ಯಾಮರಾ ಅಳವಡಿಸಿಕೊಳ್ಳಬೇಕು ಎಂದು ಚಳ್ಳಕೆರೆ ಡಿವೈಎಸ್ಪಿ ಸತ್ಯನಾರಾಯಣ ಹೇಳಿದರು. ನಾಯಕನಹಟ್ಟಿ ಪಟ್ಟಣದ ಪೋಲೀಸ್ ಠಾಣೆಯಲ್ಲಿ ಚಿತ್ರದುರ್ಗ ಜಿಲ್ಲಾ ಪೋಲಿಸ್ ಚಳ್ಳಕೆರೆ ಉಪವಿಭಾಗ,ತಳಕು ವೃತ್ತ,ನಾಯಕನಹಟ್ಟಿ ಪೊಲೀಸ್ ಠಾಣೆ ವತಿಯಿಂದ ಆಯೋಜಿಸಿದ್ದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಮಕ್ಕಳಿಗೆ ಮೊಬೈಲ್ ಕೂಡಬೇಡಿ ಮಕ್ಕಳಿಗೆ ಮೊಬೈಲ್ ಕೊಟ್ಟರೆ ಸರಿಯಾಗಿ ಶಿಕ್ಷಣ ಪಡೆಯದೇ ಮೊಬೈಲ್ ಲೋಕದಲ್ಲಿ ಮುಳುಗಿ ತಮ್ಮ ಭವಿಷ್ಯ ಹಾಳು ಮಾಡಿಕೊಳ್ಳುತ್ತಾರೆ ಅಲ್ಲದೇ ಕಾನೂನು ಅರಿವು ಇಲ್ಲದೇ ಸಾಕಷ್ಟು ತೊಂದರೆಗೆ ಒಳಗಾಗುತ್ತರೆ.