ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮದ್ದೂರು ಪಟ್ಟಣದ ಟಿ.ಬಿ. ವೃತ್ತದಿಂದ ಕೊಲ್ಲಿ ವೃತ್ತದವರೆಗೆ ರಸ್ತೆ ಅಗಲೀಕರಣ ಕಾಮಗಾರಿಯ ಕುರಿತು ಮಹತ್ವದ ಸಭೆ ನಡೆಯಿತು. 2025–26ನೇ ಸಾಲಿನ ವಾರ್ಷಿಕ ಬಜೆಟ್ನಲ್ಲಿ ಮದ್ದೂರು ನಗರ ರಸ್ತೆ ಅಗಲೀಕರಣಕ್ಕಾಗಿ ವಿಸ್ತೃತ ಯೋಜನಾ ವರದಿ (DPR) ತಯಾರಿಸುವುದಾಗಿ ಘೋಷಣೆ ಮಾಡಲಾಗಿದ್ದು, ಅದರಂತೆ ಲೋಕೋಪಯೋಗಿ ಇಲಾಖೆಯು DPR ಅನ್ನು ಈಗಾಗಲೇ ಸಿದ್ಧಪಡಿಸಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು. ಜನಸಂಚಾರ ಮತ್ತು ವಾಣಿಜ್ಯ ಚಟುವಟಿಕೆಗಳಿಗೆ ಕೇಂದ್ರವಾಗಿರುವ ಈ ಮುಖ್ಯ ಜಿಲ್ಲಾ ರಸ್ತೆ ತುಂಬಿದ ವಾಹನ ಸಂಚಾರದಿಂದ ಅತಿಯಾದ ಒತ್ತಡಕ್ಕೆ ಒಳಗಾಗಿರುವುದರಿಂದ ಅಗಲೀಕರಣ ಅತ್ಯವಶ್ಯಕವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು. ಪ್ರಸ್ತುತ ಈ ರಸ್ತೆ ಪುರಸಭೆಯ ಸುಪರ್ದಿಯ