ದೊಡ್ಡಬಳ್ಳಾಪುರ: ತೂಬಗೆರೆ ಬಸ್ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ ಆಚರಿಸಿದ ಬಿಜೆಪಿ ಕಾರ್ಯಕರ್ತರು
ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಆಚರಣೆ ದೊಡ್ಡಬಳ್ಳಾಪುರ:ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವನ್ನು ತೂಬಗೆರೆ ಬಸ್ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರು ಆಚರಿಸಿದರು. ಮೋದಿ ಭಾವಚಿತ್ರದ ಮುಂದೆ ಕೇಕ್ ಕತ್ತರಿಸಿ, ಸಾರ್ವಜನಿಕರಿಗೆ ಅನ್ನದಾನ ಮಾಡುವುದರ ಮೂಲಕ ಜನ್ಮದಿನ ಆಚರಿಸಿದರು.. ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರತಾಪ್ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶವನ್ನು ಬಲಿಷ್ಠ ಮತ್ತು ಆತ್ಮನಿರ್ಭರ ಭಾರತದ ದಿಕ್ಕಿನಲ್ಲಿ ಮುನ್ನಡೆಸುತ್ತಿರುವುದನ್ನು ಶ್ಲಾಘಿಸಿದರು.