ಪ್ರತ್ಯೇಕ ಉತ್ತರ ಕರ್ನಾಟಕಕ್ಕೆ ಬೆಂಬಲ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹೇಳಿದರು. ಉತ್ತರ ಕರ್ನಾಟಕ ಅಭಿವೃದ್ಧಿಯಿಂದ ವಂಚಿತವಾಗಿದೆ ಎಂಬುದು ನಿಜವಾದರೂ, ಪ್ರತ್ಯೇಕ ರಾಜ್ಯ ಒಂದೇ ಪರಿಹಾರವಲ್ಲ. ಎಲ್ಲರೂ ಸೇರಿ ಸದನದಲ್ಲಿ ಚರ್ಚೆ ಮಾಡಿ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು ಭಾನುವಾರ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಅವರು. ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಕೂಗಿಗೆ ನಮ್ಮ ಬೆಂಬಲವಿಲ್ಲ. ಅಖಂಡ ಕರ್ನಾಟಕದ ಅಭಿವೃದ್ಧಿಗೆ ಎಲ್ಲ ಶಾಸಕರು ಸಚಿವರು ಬದ್ಧರಾಗಿರಬೇಕು ಎಂದು ಹೇಳಿದರು