ಹುಟ್ಟಿದ ಸೂರ್ಯ ಮುಳುಗಲೇ ಬೇಕು. ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆಯುವುದರ ಮೂಲಕ ಕೇಂದ್ರ ಬಿಜೆಪಿ ಸರ್ಕಾರದ ಕೊನೆಯ ದಿನಗಳು ಪ್ರಾರಂಭವಾಗಿದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಮಧ್ತಾಹ್ನ 3 ಗಂಟೆ ಸುಮಾರಿಗೆ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು "ಆರ್ಟಿಕಲ್ 21 ರ ಮೂಲಕ ಸಾಂವಿಧಾನಿಕವಾಗಿ ಕಾಂಗ್ರೆಸ್ ಪಕ್ಷ ನೀಡಿದ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಕಾರ್ಯಕ್ರಮವನ್ನು ಬಿಜೆಪಿ ಮುಟ್ಟುವ ಧೈರ್ಯ ಮಾಡುತ್ತದೆ ಎಂದುಕೊಂಡಿರಲಿಲ್ಲ. ಆದರೆ ಈಗ ನರೇಗಾ ಹೆಸರನ್ನು ಬದಲಾವಣೆ ಮಾಡಲು ಹೊರಟಿರುವುದು ನೋಡಿದರೆ ಬಿಜೆಪಿಯ ಅಂತ್ಯ ಪ್ರಾರಂಭವಾಗಿದೆ ಎಂದು ನನಗೆ ಅನಿಸುತ್ತಿದೆ" ಎಂದರು.