ಶಿವಮೊಗ್ಗ: ಶಂಕರಘಟ್ಟದ ಕುವೆಂಪು ವಿವಿಯಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸ್ನಾತಕೋತ್ತರ ವಿದ್ಯಾರ್ಥಿಗಳ ಪ್ರತಿಭಟನೆ
ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಗುರುವಾರ ಪ್ರತಿಭಟನೆ ನಡೆಸಿದರು. ಶಂಕರಘಟ್ಟದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್ ನಲ್ಲಿ ಎಲ್ಲಾ ವಿಭಾಗದ ವಿದ್ಯಾರ್ಥಿಗಳು ಮೆರವಣಿಗೆ ನಡೆಸಿ ಆಡಳಿತ ಭವನದ ಮುಂಭಾಗ ಧರಣಿ ನಡೆಸಿದ್ದಾರೆ.ಕುವೆಂಪು ವಿವಿಯಲ್ಲಿ ಹಗರಣಗಳಿಂದ ಮನನೊಂದ ವಿದ್ಯಾರ್ಥಿಯೊಬ್ಬ ಬುಧವಾರ ಆತ್ಮಹತ್ಯೆ ನಿಷಿದ್ಧ ಇದರ ಬೆನ್ನಿಗೆ ಆಕ್ರೋಶಗೊಂಡ ವಿದ್ಯಾರ್ಥಿಗಳು ಗುರುವಾರ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ.