ಬಳ್ಳಾರಿ: 71ನೇ ಕನ್ನಡ ರಾಜ್ಯೋತ್ಸವ: ಜಿಲ್ಲಾ ಕೇಂದ್ರದಲ್ಲಿ ಅದ್ಧೂರಿ ಆಚರಣೆಗೆ ಸಿದ್ಧತೆ
ನವೆಂಬರ್ 1ರಂದು ನಡೆಯುವ 71ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ, ಸ್ತಬ್ಧಚಿತ್ರಗಳ ಮೆರವಣಿಗೆ, ಸಾಧಕರಿಗೆ ಸನ್ಮಾನ ಹಾಗೂ ಖಾಸಗಿ ಶಾಲೆಗಳಲ್ಲಿ ಕಡ್ಡಾಯ ಆಚರಣೆಗೆ ಸೂಚನೆ ನೀಡಲಾಗಿದೆ.