ಬೆಂಗಳೂರು ಉತ್ತರ: ಪರಮೇಶ್ವರ್ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
ಪೊಲೀಸ್ ಇಲಾಖೆಯ ಅಧಿಕಾರಿಗಳೊಂದಿಗೆ ಸೆಪ್ಟೆಂಬರ್ 19ರಂದು ಸಂಜೆ 5 ಗಂಟೆಗೆ ಗೃಹ ಸಚಿವರು ಪ್ರಗತಿ ಪರಿಶೀಲನಾ ಸಭೆ ನಡೆಸಿದರು.ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ.ಸಲೀಂ, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಡಿಸಿಆರ್‌ಇ ವಿಭಾಗದ ಡಿಜಿಪಿ ಕೆ.ರಾಮಚಂದ್ರರಾವ್, ಪ್ರಣಬ್ ಮೊಹಂತಿ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಎಡಿಜಿಪಿ ಆರ್.ಹಿತೇಂದ್ರ, ಉಮೇಶ್, ಹರಿಶೇಖರನ್, ಸೌಮೇಂದು ಮುಖರ್ಜಿ, ಗೃಹ ಇಲಾಖೆಯ ಕಾರ್ಯದರ್ಶಿ ಕೆ.ವಿ.ಶರತ್ ಚಂದ್ರ, ಜಂಟಿ ಪೊಲೀಸ್ ಆಯುಕ್ತರು ಹಾಗೂ ಬೆಂಗಳೂರಿನ ಎಲ್ಲ ವಿಭಾಗದ ಡಿಸಿಪಿಗಳು ಸಭೆಯಲ್ಲಿದ್ದರು