ಕುಮಟಾ: ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿರುವ ಪ್ರಸಿದ್ಧ ಶ್ರೀ ಮಹಾಬಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಪವಿತ್ರ ಆತ್ಮಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಿ ಶ್ರದ್ಧಾಭಕ್ತಿಯಿಂದ ಪ್ರಾರ್ಥನೆ ನಡೆಸಿದರು. ದೇವಸ್ಥಾನಕ್ಕೆ ಆಗಮಿಸಿದ ವೇಳೆ ಡಿ.ಕೆ. ಶಿವಕುಮಾರ್ ಅವರನ್ನು ದೇವಸ್ಥಾನ ಆಡಳಿತ ಮಂಡಳಿ ಹಾಗೂ ಅರ್ಚಕರು ಪರಂಪರಾಗತ ವಿಧಿವಿಧಾನಗಳೊಂದಿಗೆ ಆತ್ಮೀಯವಾಗಿ ಸ್ವಾಗತಿಸಿದರು.