*ಮಕ್ಕಳು ದೇಶದ ಆಸ್ತಿ: ಸಚಿವ ಮುನಿಯಪ್ಪ* ಮಕ್ಕಳು ಈ ದೇಶದ ಭವಿಷ್ಯ, ದೇಶದ ಆಸ್ತಿ ಅವರಿಗೆ ಗುಣಮಟ್ಟದ ವಿದ್ಯಾಬ್ಯಾಸ ನೀಡುವುದರ ಜೊತೆಗೆ ಪೋಷಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ದೇವನಹಳ್ಳಿ ಟೌನ್ ನ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲ ಭವನ ಸೊಸೈಟಿ ಹಾಗೂ