ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಂತಿನಗರದಲ್ಲಿ ಕೇಂದ್ರ ಸಚಿವರಾದ ಶ್ರೀಮತಿ ಶೋಭಾ ಕರಂದ್ಲಾಜೆ ಅವರ ನೇತೃತ್ವದಲ್ಲಿ ಇಂದು ಭಾರತೀಯ ಜನತಾ ಪಕ್ಷದ ವತಿಯಿಂದ ಮನೆ ಮನೆ ಭೇಟಿ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾಜಿ ಪಂಚಾಯತ್ ಸದಸ್ಯರಾದ ಶ್ರೀ ಸುರೇಶ್ ಖಾಡೆ ಹಾಗೂ ಚಿಕ್ಕಬಾಣಾವರದಲ್ಲಿರುವ ಶ್ರೀ ಶಂಕರಪ್ಪ ಅವರ ಮನೆಗಳಿಗೆ ಭೇಟಿ ನೀಡಲಾಯಿತು. ಕಾರ್ಯಕ್ರಮದಲ್ಲಿ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್. ಮುನಿರಾಜು, ಮಂಡಲ ಅಧ್ಯಕ್ಷರಾದ ಶ್ರೀ ಸೋಮಶೇಖರ್, ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಕೃಷ್ಣಮೂರ್ತಿ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.