ಹಳಿಯಾಳ : ಹಳಿಯಾಳ-ದಾಂಡೇಲಿ-ಜೋಯಿಡಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಭಾರತೀಯ ಜನತಾ ಪಕ್ಷದ ವತಿಯಿಂದ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಹಳಿಯಾಳ ತಹಶೀಲ್ದಾರ್ ಕಛೇರಿ ಎದುರು ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಮಾಜಿ ಶಾಸಕರಾದ ಸುನಿಲ್ ಹೆಗಡೆ ರವರ ನೇತೃತ್ವದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೆಕರ ಹಾಗೂ ಜಿಲ್ಲಾ ವಿಶೇಷ ಆಹ್ವಾನಿತರಾದ ಮಂಗೇಶ ದೇಶಪಾಂಡೆ ಯವರ ಉಪಸ್ಥಿತಿಯಲ್ಲಿ ಮಂಡಲ ಅಧ್ಯಕ್ಷರಾದ ಶ್ರೀ ವಿಠ್ಠಲ ಸಿದ್ದನ್ನವರ ರವರ ಅಧ್ಯಕ್ಷತೆಯಲ್ಲಿ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.