ಮಳವಳ್ಳಿ: ಚಿಕ್ಕಮಲಗೂಡು ಗ್ರಾಮದಲ್ಲಿ ಮಳೆಯ ಆರ್ಭಟಕ್ಕೆ ಜಮೀನುಗಳು ಜಲಾವೃತ್ತ
ಮಳವಳ್ಳಿ ತಾಲ್ಲೂಕಿನ ಚಿಕ್ಕಮಲಗೂಡು ಗ್ರಾಮದಲ್ಲಿ ಮಳೆಯ ಆರ್ಭಟಕ್ಕೆ ಜಮೀನುಗಳು ಜಲಾವೃತ್ತಗೊಂಡಿವೆ. ಕಳೆದ 2 ದಿನಗಳಿಂದ ಸುರಿದ ಭಾರಿ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಭತ್ತ, ತೆಂಗು, ಕಬ್ಬು ಸೇರಿದಂತೆ ಹಲವು ಬೆಳೆಗಳನ್ನು ಬೆಳೆದ ರೈತರ ಜಮೀನುಗಳಿಗೆ ನೀರು ನುಗ್ಗಿ ಅಪಾರ ನಷ್ಟ ಉಂಟುಮಾಡಿದೆ. ಕಬ್ಬು, ಭತ್ತ, ರಾಗಿ ಸೇರಿದಂತೆ ಹಲವು ಬೆಳೆಗಳಿಗೆ ನೀರು ನುಗ್ಗಿದ ಪರಿಣಾಮ ಬೆಳೆ ನಾಶಗೊಂಡು ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಮಳೆಯ ಅಬ್ಬರದಿಂದ ರೈತರ ಜೀವನ ಅಸ್ಥವ್ಯಸ್ಥಗೊಂಡಿದೆ. ಸಕರ್ಾರ ನಷ್ಟಕೊಳಗಾದ ಜಮೀನಿನ ಮಾಲೀಕರಿಗೆ ಸೂಕ್ತ ಪರಿಹಾರ ನೀಡಬೇಕೆಂದು ರೈತರು ಒತ್ತಾಯಿಸಿದ್ದಾರೆ