ಹೊಸನಗರ: ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಪ್ರತೀಕವಾಗಿರಬೇಕು: ಹೊಸನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ
ಗ್ರಾಮ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಜನಸಂಖ್ಯೆ ಅನುಗುಣವಾಗಿ ಸದ್ಯ ಲಭ್ಯವಿರುವ ಅನುದಾನವನ್ನು ಹೊರತು ಪಡಿಸಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳಿಗೆ ಬೇಕಾಗುವ ಅನುದಾನ ವಿವರನ್ನು ಮತ್ತು ಬೇಡಿಕೆಗಳ ಪಟ್ಟಿ ಸಲ್ಲಿಸಿ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಅಧಿಕಾರಿಗಳಿಗೆ ತಿಳಿಸಿದರು. ಹೊಸನಗರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನೆಡೆದ 2026-27 ನೇ ಸಾಲಿನ ಕರಡು ಅಭಿವೃದ್ಧಿ ಯೋಜನೆ ಸಭೆಯನ್ನು ಉದ್ದೇಶಿಸಿ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಮಾತನಾಡಿದ ಅವರು, ಗ್ರಾಮೀಣ ಅಭಿವೃದ್ಧಿಗೆ ಸರಕಾರದಿಂದ ಬಿಡುಗಡೆ ಆಗುವ ಅನುದಾನದ ಪ್ರತಿ ಪೈಸೆ ಸದುಪಯೋಗವಾಗಬೇಕು ಹಾಗೆಯೇ ಯೋಜನೆ ಅನುಗುಣವಾಗಿ ಹಣ ಬಳಕೆಯಾಗಬೇಕು ಎಂದರು