ರಾಮನಗರ: ಬೈರಮಂಗಲ ಕೃಷಿ ಸಹಕಾರ ಸಂಘದ ಅಧ್ಯಕ್ಷರಾಗಿ ಮಹೇಶ ಅವಿರೋಧ ಆಯ್ಕೆ
ಬೈರಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಮಹೇಶ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಟಿ. ಮಂಜುನಾಥ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಹೇಶ ಅವರು ಆಯ್ಕೆಯಾಗಿದ್ದಾರೆ.