ರಾಯಚೂರು: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದಲ್ಲಿ ಸಾಲುಮರದ ತಿಮ್ಮಕ್ಕ ನಿಧನ ಮೌನಾಚರಣೆ ಮೂಲಕ ಸಂತಾಪ ಸೂಚನೆ ಸಭೆ
ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಹಾಲ್ನಲ್ಲಿ ಶನಿವಾರ ಸಾಲುಮರದ ತಿಮ್ಮಕ್ಕ ಅವರ ನಿಧನಕ್ಕೆ ಮೌನಾಚರಣೆ ಮೂಲಕ ಸಂತಾಪ ಸೂಚಿಸಲಾಯಿತು. ಕುಲಪತಿ ಪ್ರೊ.ಶಿವಾನಂದ ಕೆಳಗಿನಮನಿ ಅವರು ಮಾತನಾಡಿ, ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕನವರು ನಿಧನರಾದ ಸುದ್ದಿ ತಿಳಿದು ವಿಷಾದವಾಯಿತು. ಗಿಡ-ಮರಗಳನ್ನು ಬೆಳೆಸುವುದರೊಂದಿಗೆ ಪರಿಸರ ಸಂರಕ್ಷಣೆಗೆ ವಿಶೇಷ ಕಾಳಜಿವಹಿಸಿ ಜೀವಿಸಿದ ಅವರ ಶೈಲಿಯೇ ಎಲ್ಲರಿಗೂ ಪ್ರೇರಣೆಯಾಗಬೇಕು ಎಂದು ಹೇಳಿದರು ನವೆಂಬರ್ 16 ರಂದು ಸಂಜೆ 6-00 ಗಂಟೆಗೆ ವಿಶ್ವವಿದ್ಯಾಲಯ ದಿಂದ ಮಾಧ್ಯಮಕ್ಕೆ ಪ್ರಕಟಣೆ ನೀಡಿದ್ದಾರೆ