ಗದಗ: ಸುಸಜ್ಜಿತ ರೈಲ್ವೆ ನಿಲ್ದಾಣ ಉದ್ಘಾಟನೆ ಆಗುತ್ತಿರುವುದು ಸಂತಸದ ವಿಷಯ: ನಗರದಲ್ಲಿ ಬಿ.ಶ.ಘ.ಮ.ಮೋ.ಅಧ್ಯಕ್ಷೆ ವಿಜಯಲಕ್ಷ್ಮೀ
Gadag, Gadag | May 21, 2025 ಗದಗ ನಗರದಲ್ಲಿ ಅತ್ಯಂತ ಸುಸಜ್ಜಿತವಾದ ರೈಲ್ವೆ ನಿಲ್ದಾಣ ಉದ್ಘಾಟನೆ ಆಗುತ್ತಿರುವುದು ಸಂತಸದ ವಿಷಯವಾಗಿದೆ. ಹಿಂದಿನ ಲೋಕಸಭಾ ಸದಸ್ಯ ಶಿವಕುಮಾರ್ ಉದಾಸಿ ಅವರ ಇಚ್ಛಾಶಕ್ತಿಯಿಂದಾಗಿ ನೂತನ ರೈಲ್ವೆ ನಿಲ್ದಾಣಕ್ಕೆ ಭೂಮಿ ಪೂಜೆಯನ್ನು ಮಾಡಲಾಗಿತ್ತು. ಕೆಲವೇ ದಿನಗಳಲ್ಲಿ ಕಾಮಗಾರಿ ಪೂರ್ಣಗೊಂಡಿದ್ದು, ಮೇ 22 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರು ವರ್ಚುವಲ್ ಮೂಲಕ ನಗರದ ರೈಲ್ವೆ ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದಾರೆ ಅಂತ ಬಿಜೆಪಿ ಶಹರ ಘಟಕದ ಮಹಿಳಾ ಮೋರ್ಚ ಅಧ್ಯಕ್ಷೆ ವಿಜಯಲಕ್ಷ್ಮಿ ಮಾನ್ವಿ ಹೇಳಿದರು.