ಮಂಡ್ಯ: ನಗರದ ಗುತ್ತಲು ಬಡಾವಣೆಯಲ್ಲಿ ಮಾಸಿನಕ ಖಿನ್ನತೆ ವ್ಯಕ್ತಿ ಆತ್ಮಹತ್ಯೆ
Mandya, Mandya | Dec 13, 2025 ಮಂಡ್ಯದಲ್ಲಿ ಮಾಸಿನಕ ಖಿನ್ನತೆ, ವ್ಯಕ್ತಿ ಆತ್ಮಹತ್ಯೆ ಮಂಡ್ಯದ ಗುತ್ತಲು ಬಡಾವಣೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ 45 ವರ್ಷದ ರಾಘವೇಂದ್ರ ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಅವರ ತಂದೆಯೂ ವಯೋಸಹಜ ಸಾವನ್ನಪ್ಪಿದ್ದರು. ತಂದೆಯ ಸಾವಿನಿಂದ ಅನಾರೋಗ್ಯದ ಸಮಸ್ಯೆಯಿಂದ ರಾಘವೇಂದ್ರ ಮನನೊಂದಿದ್ದರು. ಈ ಹಿನ್ನೆಲೆಯಲ್ಲಿ ಅವರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಪೂರ್ವ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣ ಪೂರ್ವ ಪೊಲೀಸ್ ಠಾಣಾ ಪ್ರಕರಣ ದಾಖಲಾಗಿದೆ.