ಬಳ್ಳಾರಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕರಾಗಿ ಬಿಜೆಪಿಯ ಹಿರಿಯ ಕಾರ್ಪೋರೇಟರ್, 24ನೇ ವಾರ್ಡ್ನ ಪಾಲಿಕೆ ಸದಸ್ಯ ಶ್ರೀನಿವಾಸ್ ಮೋತ್ಕರ್ ಅವರು ಇಂದು ಪೂರ್ವಾಹ್ನ ವಿದ್ಯುಕ್ತವಾಗಿ ಜವಾಬ್ದಾರಿ ವಹಿಸಿಕೊಂಡರು. ಪಾಲಿಕೆಯ ವಿರೋಧ ಪಕ್ಷದ ನಾಯಕರ ಚೇಂಬರ್‌ನಲ್ಲಿ ಶುಕ್ರವಾರ ಬೆಳಿಗ್ಗೆ 11ಗಂಟೆಗೆ ದೇವರ ಪಟಕ್ಕೆ ಪೂಜೆ ಸಲ್ಲಿಸಿದ ನಂತರ, ವಿದ್ಯುಕ್ತವಾಗಿ ವಿಪಕ್ಷ ನಾಯಕರಾಗಿ ಶ್ರೀನಿವಾಸ್ ಮೋತ್ಕರ್ ಅವರು ಅಧಿಕಾರ ವಹಿಸಿಕೊಂಡರು. ಬಳ್ಳಾರಿ ನಗರ ಮಾಜಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ, ಹಿರಿಯ ಧುರೀಣ ಹೆಚ್. ಹನುಮಂತಪ್ಪ, ಕೃಷ್ಣಾರೆಡ್ಡಿ, ಜನತಾ ಬಜಾರ್ ಅಧ್ಯಕ್ಷ ಕೆ.ಎ.ವೇಮಣ್ಣ ಹಾಗೂ ಬಿಜೆಪಿಯ ಪಾಲಿಕೆ ಸದಸ್ಯರು, ಮುಖಂಡರು, ನಗರ ಪಾಲಿಕೆಯ ನೂತನ ವಿರೋಧ ಪಕ್ಷದ ನಾಯಕ ಶ್ರೀನಿವಾಸ್ ಮೋತ್ಕರ್ ಅವರಿಗೆ ಅಭಿನಂದನೆ ಸಲ್ಲಿಸಿ, ಶು