ಹೊಸಕೋಟೆ: ಸುಳ್ಳು ಭರವಸೆ ಮೂಲಕ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಜನರ ಬಳಿ ತೆರಿಗೆ ವಸೂಲಿ ಮಾಡುತ್ತಿದೆ: ಹೊಸಕೋಟೆಯಲ್ಲಿ ಸಂಸದ ಸುಧಾಕರ್
ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಹೊಸಕೋಟೆಯ ಚಿಕ್ಕಹುಲ್ಲೂರು ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಸುಧಾಕರ್ ಅವರು, ರಾಜ್ಯ ಸರಕಾರ ಮಕ್ಕಳು ಕುಡಿಯುವ ಹಾಲಿಗೆ ಬೆಲೆ ಏರಿಕೆ ಮಾಡಿ ರೈತರಿಗೆ ನಷ್ಟ ಉಂಟುಮಾಡುತ್ತಾ ಜನರ ಬಳಿ ತೆರಿಗೆ ವಸೂಲಿ ಮಾಡುತ್ತಿದ್ದಾರೆ. ರಾಜ್ಯ ಸರಕಾರಕ್ಕೆ ಯಾವುದೇ ನೈತಿಕತೆ ಇಲ್ಲ, ಜನರಿಗೆ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ. ಕೇಂದ್ರ ಸರಕಾರ ಜನರ ಪರವಾಗಿದ್ದು ಜನರಿಗೆ ಅನುಕೂಲ ಕಲ್ಪಿಸಿ ಸೆಸ್ ಕಡಿಮೆ ಮಾಡಿದೆ. ಆದರೆ ರಾಜ್ಯ ಸರಕಾರ ಜನರಿಗೆ ಬೆಲೆ ಏರಿಕೆಯ ಬಿಸಿ ಹೊರಸಿದ್ದಾರೆ.