ಶಿವಮೊಗ್ಗ: ಸಿದ್ಲಿಪುರದ ತುಂಗಭದ್ರ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಆರೋಪ, ಅಧಿಕಾರಿಗಳು ದಾಳಿ
ತುಂಗಭದ್ರ ನದಿಯಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಸುತ್ತಿರುವ ಆರೋಪದ ಹಿನ್ನೆಲೆ ಭದ್ರಾವತಿ ತಾಲೂಕು ಸಿದ್ಲಿಪುರದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮರಳು ಸಾಗಣೆಗೆ ಅವಕಾಶ ಮಾಡಿಕೊಟ್ಟ ತೋಟದ ಮಾಲೀಕರ ವಿರುದ್ಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ರಮ ಮರಳು ಗಣಿಗಾರಿಕೆ ಸಾರ್ವಜನಿಕರಿಂದ ನಿರಂತರ ದೂರುಗಳ ಹಿನ್ನೆಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಪೊಲೀಸರ ಜೊತೆಗೆ ದಾಳಿ ನಡೆಸಿದ್ದರು. ಅಧಿಕಾರಿಗಳನ್ನು ನೋಡಿ ಕೆಲಸ ಮಾಡುತ್ತಿದ್ದವರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.