ಚಿತ್ರದುರ್ಗ: ಚಿತ್ರದುರ್ಗ ನಗರ ಕೇಂದ್ರ ಗ್ರಂಥಾಲಯದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ: ಹೀಗೆ ನೋಂದಾಯಿಸಿ
ಚಿತ್ರದುರ್ಗ ನಗರ ಕೇಂದ್ರ ಗ್ರಂಥಾಲಯದಲ್ಲಿ ನವೆಂಬರ್ 17 ಮತ್ತು 19 ರಂದು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಚಿತ್ರಕಲಾ, ಪ್ರಬಂಧ ಮತ್ತು ರಂಗೋಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ನವೆಂಬರ್ 16 ರ ಸಂಜೆ 5 ಗಂಟೆಯೊಳಗೆ ಹೆಸರು ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ.