ಇಂಡಿ: ಕೇಡಗಿ ಗ್ರಾಮದಲ್ಲಿ ನೆರೆ ಸಂತ್ರಸ್ತರ ಆಹ್ವಾಲು ಆಲಿಸಿದ ವಿಪಕ್ಷ ನಾಯಕ ಆರ್ ಅಶೋಕ್
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಕೇಡಗಿ ಗ್ರಾಮದಲ್ಲಿ ಶನಿವಾರ ಸಾಯಂಕಾಲ 5ಗಂಟೆ ಸುಮಾರಿಗೆ ಬಿಜೆಪಿ ಅತಿವೃಷ್ಟಿ ತಂಡ ಸಂತ್ರಸ್ತರ ಅಹವಾಲುಗಳನ್ನು ಆಲಿಸಿದರು. ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾದ ಹಿನ್ನಲೆ ನಮಗೆ ಸೂಕ್ತವಾದ ಪರಿಹಾರ ನೀಡಬೇಕು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಮುಂದೆ ಗ್ರಾಮದ ರೈತರು ಮನವಿ ಮಾಡಿಕೊಂಡರು. ಇನ್ನು ಜನ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಯಾವುದೇ ರೀತಿಯಿಂದ ಸಮಸ್ಯೆ ಕೇಳದೆ ನಮ್ಮನ್ನು ಕಡೆಗಣಿಸಿದ್ದಾರೆ ಹೀಗಾಗಿ ತಾವು ನಮಗೆ ಸೂಕ್ತವಾದ ನ್ಯಾಯ ಒದಗಿಸುವ ಕೆಲಸ ಮಾಡಬೇಕು ಎಂದು ರೈತರು ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಸೇರಿದಂತೆ ಬಿಜೆಪಿ ಮುಖಂಡರುಗಳು ಉಪಸ್ಥಿತರಿದ್ದರು.