ಕೋಲಾರ: ಅಂಗವಿಕಲರ ಧ್ವನಿಗೆ ತ್ವರಿತ ಪ್ರತಿಕ್ರಿಯೆ: ಕುಂದುಕೊರತೆ ನಿವಾರಣೆಗೆ ಜಿಲ್ಲಾಡಳಿತ ಸ್ಪಂದನೆ
Kolar, Kolar | Nov 29, 2025 ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಅಂಗವಿಕಲರ ಕುಂದುಕೊರತೆ ಸಭೆಗಳನ್ನು ನಿಯಮಿತವಾಗಿ ನಡೆಸಿ, ಅವರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ಎಂ. ಮಂಗಳ ತಿಳಿಸಿದ್ದಾರೆ. ಕೋಲಾರ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಶನಿವಾರ ಸಂಜೆ 4 ಗಂಟೆಯಲ್ಲಿ ನಡೆದ ವಿಕಲಚೇತನರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು, ಸರ್ಕಾರ ಅಂಗವಿಕಲರ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಅರ್ಹರಿಗೆ ಲಾಭ ತಲುಪುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.