ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಪಂಚಾಯಿತಿಗೆ “ಜಲ ಸಂಚಯ್ - ಜನ ಭಾಗೀಧಾರಿ” ರಾಷ್ಟ್ರ ಪ್ರಶಸ್ತಿ ಗರಿ
ಚಿತ್ರದುರ್ಗ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಜಲ ಸಂರಕ್ಷಣಾ ಕಾಮಗಾರಿಗಳನ್ನು ಉತ್ತಮವಾಗಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಜಲ ಶಕ್ತಿ ಇಲಾಖೆ ನೀಡುವ 'ಜಲ ಸಂಚಾಯ್, ಜನ ಭಾಗಿಧಾರಿ' (ಜಿ.ಎಸ್.ಜೆ.ಬಿ) ರಾಷ್ಟ್ರ ಪ್ರಶಸ್ತಿಗೆ ಜಿಲ್ಲೆಯು ಭಾಜನವಾಗಿದೆ. ನವದೆಹಲಿಯಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು, ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಉಪಸ್ಥಿತಿಯಲ್ಲಿ ನೀಡಿದ ಪ್ರಶಸ್ತಿಯನ್ನು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರಿಂದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಅವರು ಸ್ವೀಕರಿಸಿದರು.