ಮೇಕೆದಾಟು ವಿಚಾರಕ್ಕೆ ಸಂಬಂಧಿಸಿದಂತೆ ಗುರುವಾರ ಮಧ್ಯಾಹ್ನ 3:30 ರ ಸುಮಾರಿಗೆ ವಿಧಾನಸೌಧಕ್ಕೆ ಆಗಮಿಸಿದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮಗಳ ಜೊತೆ ಮಾತನಾಡಿ, ಮೇಕೆದಾಟು ವಿಚಾರದಲ್ಲಿ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಲ್ಲಿ ವಜಾ ಆಗಿದೆ. ಇದು ಸಂತೋಷ ದ ವಿಚಾರ. ಇಷ್ಟು ಜನರ ಕೂಗು, ಪ್ರಾರ್ಥನೆ ದೇವರಿಗೆ ಕೇಳಿಸಿದೆ ಅನಿಸ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಗೊತ್ತಾಗಬೇಕಿದೆ ಎಂದರು.