ಸಿಂದಗಿ: ಪಟ್ಟಣದಲ್ಲಿ ಸಂತ್ರಸ್ತರ ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿದ, ವಿಧಾನ ಪರಿಷತ್ ವಿಪಕ್ಷ ನಾಯಕ ಚೆಲವಾದಿ ನಾರಾಯಣಸ್ವಾಮಿ
ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ರಸ್ತೆ ಅಗಲೀಕರಣದ ಹೆಸರಿನಲ್ಲಿ ಸುಮಾರು 84 ಕುಟುಂಬಗಳ ಮನೆಗಳನ್ನು ತೆರವು ಮಾಡಿದನು ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವ ಸ್ಥಳಕ್ಕೆ ಮಂಗಳವಾರ ಸಾಯಂಕಾಲ 5ಗಂಟೆ ಸುಮಾರಿಗೆ ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿ ಸರ್ಕಾರ ಮನೆ ಕಳೆದುಕೊಂಡ ಸಂತ್ರಸ್ತರಿಗೆ ವಸತಿ ಒದಗಿಸಬೇಕು, ಯಾವುದೇ ವಸತಿ ವ್ಯವಸ್ಥೆ ಕಲ್ಪಿಸದೆ ಈ ಏಕಾಏಕಿ ತೆರವು ಮಾಡಿದ್ದು ಸೂಕ್ತವಲ್ಲ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಂಸದ ರಮೇಶ್ ಜಿಗಜಿಣಗಿ ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.